ಕ್ಷಯ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕ್ಷಯ ರೋಗದಿಂದ ಪೀಡಿತ ವ್ಯಕ್ತಿಯ ಪುಪ್ಪಸಗಳ ಕ್ಷ-ಕಿರಣ ಚಿತ್ರ

ಕ್ಷಯ ಮಾನವನಿಗೆ ಮತ್ತು ಹಲವು ಪ್ರಾಣಿಗಳಿಗೆ ಬರುವ ಒಂದು ಮಾರಕ ರೋಗ. ಈ ರೋಗವು ಮೈಕೊಬ್ಯಾಕ್ಟೀರಿಯಂ ಜಾತಿಯ ಹಲವು ಬ್ಯಾಕ್ಟೀರಿಯಗಳಿಂದ ಬರುತ್ತದೆ. ಪ್ರಮುಖವಾಗಿ ಪುಪ್ಪಸಗಳಿಗೆ ಹಾನಿ ಮಾಡುವ ಈ ರೋಗ ಮುಂದೆ ದೇಹದ ಹಲವು ಅಂಗಾಂಗಗಳ ಮೇಲೆ ತನ್ನ ದುಷ್ಪರಿಣಾಮ ಬೀರುತ್ತದೆ.

ಸೋಂಕು ಹರಡುವ ರೀತಿ[ಬದಲಾಯಿಸಿ]

ಕ್ಷಯ' ಮಾನವನಿಗೆ ಅದೇ ರೀತಿ ಹಲವು ಪ್ರಾಣಿಗಳಿಗೆ ಬರುವ ಒಂದು ಮಾರಕ ರೋಗ. ಈ ರೋಗವು ಮೈಕೊ 'ಬ್ಯಾಕ್ಟೀರಿಯಂ ಟ್ಯೂಬರ್‌ಕ್ಯುಲೋಸಿಸ್' ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಪ್ರಮುಖವಾಗಿ ಪುಪ್ಪಸಗಳಿಗೆ ಹಾನಿ ಮಾಡುವ ಈ ರೋಗವು ದೇಹದ ಅಂಗಾಂಗಗಳ ಮೇಲೆ ಹಲವು ದುಷ್ಪರಿಣಾಮ ಬೀರುತ್ತದೆ.

ಕ್ಷಯ ರೋಗಕ್ಕೆ ಸಮಾರು ನೂರು ವರ್ಷಗಳ ಇತಿಹಾಸವಿದೆ. ಇದು ಸಂಪೂರ್ಣವಾಗಿ ಗುಣಪಡಿಸುಬಹುದಾದ ಕಾಯಿಲೆಯಾಗಿದೆ. ರೋಗಿಯೊಬ್ಬ ಕೆಮ್ಮಿದಾಗ ಕಫದಲ್ಲಿರುವ ರೋಗಾಣುವಿನಿಂದ ಈ ರೋಗ ಹರಡುತ್ತದೆ. ಕಾಯಿಲೆ ಇರುವವರು ಕೆಮ್ಮಿದಾಗ, ಸೀನಿದಾಗ ಅಥವಾ ಉಗುಳಿದಾಗ ತುಂತುರು ಹನಿಗಳ ಮೂಲಕ ಬೇರೊಬ್ಬ ವ್ಯಕ್ತಿಗೆ ರೋಗ ಹರಡಲು ಕಾರಣವಾಗುತ್ತದೆ. ಹೀಗಾಗಿ ಇದು ಗಾಳಿಯ ಮೂಲಕವೂ ಹರಡುತ್ತವೆ.

ಈ ಸೋಂಕು ತಗುಲಿದ ವ್ಯಕ್ತಿಯು ಒಂದು ವರ್ಷದಲ್ಲಿ ಹತ್ತು ಜನರಿಗೆ ಸೋಂಕು ತಗಲಿಸಬಹುದು. ಇದು ಸಾಮಾನ್ಯವಾಗಿ 15ರಿಂದ 45 ವರ್ಷದೊಳಗಿನವರಿಗೆ ಹೆಚ್ಚಾಗಿ ತಗಲುತ್ತವೆ. ಕ್ಷಯರೋಗದ ಪ್ರಮುಖ ಲಕ್ಷ್ಮಣಗಳು- ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ಅಶಕ್ತತೆ, ಕಫದಲ್ಲಿ ರಕ್ತ, ರಾತ್ರಿಯಲ್ಲಿ ಬೆವರು, ಎದೆನೋವು, ಹಸಿವಾಗದಿರುವುದು. ಎಚ್‌ಐವಿ, ಏಡ್ಸ್ ಮತ್ತು ಮಧುಮೇಹ ರೋಗಿಗಳಿಗೂ ಬೇಗನೇ ಸೋಂಕು ತಗಲುವ ಸಾಧ್ಯತೆ ಹೆಚ್ಚಿವೆ.

ಕ್ಷಯದ ಪರಿಣಾಮ[ಬದಲಾಯಿಸಿ]

ಕ್ಷಯರೋಗದ ಲಕ್ಷ್ಮಣಗಳು ಕಂಡುಬಂದಲ್ಲಿ ತಾತ್ಸಾರ ಮಾಡದೆ ಕೂಡಲೇ ಅರ್ಹ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೂಕ್ತ ಚಿಕಿತ್ಸೆ ಪಡೆಯದಿದ್ದಲ್ಲಿ ರೋಗ ಮತ್ತಷ್ಟು ಮಾರಕವಾಗುವ ಸಾಧ್ಯತೆ ಹೆಚ್ಚಿದೆ. ಸರಿಯಾದ ಚಿಕಿತ್ಸೆ ಪಡೆಯದಿದ್ದರೆ ಶ್ವಾಸಕೋಶ, ಮೆದುಳು, ಬೆನ್ನಮೂಳೆ ಭಾಗಗಳಿಗೆ ಹಾನಿಕಾರಕವಾಗುತ್ತದೆ. ಹಾಗಾಗಿ ರೋಗವನ್ನು ಯಾವುದೇ ಹಂತದಲ್ಲಿಯೂ ಕಡೆಗಣಿಸಬಾರದು.

ಪೌಷ್ಠಿಕ ಆಹಾರ ಕೊರತೆಯಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದ್ದರಿಂದ ರೋಗಾಣುಗಳು ಬೇಗನೇ ದೇಹವನ್ನು ಆಕ್ರಮಿಸುಕೊಳ್ಳುತ್ತವೆ.

ರೋಗದ ಬಗೆಗಳು[ಬದಲಾಯಿಸಿ]

ಕೆಮ್ಮು, ಜ್ವರ, ತೂಕ ಕಡಿಮೆಯಾಗುವುದು, ಅಶಕ್ತತೆ, ಕಫದಲ್ಲಿ ರಕ್ತ, ರಾತ್ರಿಯಲ್ಲಿ ಬೆವರು, ಎದೆನೋವು, ಹಸಿವಾಗದಿರುವುದು.

ಕಂಡು ಹಿಡಿಯುವ ವಿಧಾನ[ಬದಲಾಯಿಸಿ]

ಕಫ ಪರೀಕ್ಷೆ, ಎಕ್ಸ್‌ರೇ ಮತ್ತು ರಕ್ತ ಪರೀಕ್ಷೆಯಿಂದಲೂ ರೋಗವನ್ನು ನಿರ್ಧರಿಸಬಹುದಾಗಿದೆ.

ಧಾತು (ವ್ಯಾಕ್ಸಿನೇಷನ್)ಮತ್ತು ಅದರ ಪರಿಣಾಮ[ಬದಲಾಯಿಸಿ]

ರೋಗ ಪರಿಹಾರಕ್ಕಾಗಿ ಔಷಧಿಗಳು[ಬದಲಾಯಿಸಿ]

ರಿಫಾಂಪಿಸಿಸ್, ಇತ್ಯಾಂಬ್ಯುಟಾಲ್ ಮತ್ತು ಐಸೊನೆಕ್ಸ್‌ಗಳಂತಹ ಔಷಧಗಳಿಂದ ಈ ರೋಗ ವಾಸಿಯಾಗುತ್ತದೆ. ಈಗ ಡಾಟ್ಸ್ ಚಿಕಿತ್ಸಾ ವಿಧಾನದಲ್ಲಿ ಪರಿಣಾಮಕಾರಿ ಐದು ಔಷಧಿಗಳಿದ್ದು, ಕನಿಷ್ಠ 6 ತಿಂಗಳು ತಪ್ಪದೆ ಸೇವಿಸಬೇಕು.

"https://kn.wikipedia.org/w/index.php?title=ಕ್ಷಯ&oldid=596787" ಇಂದ ಪಡೆಯಲ್ಪಟ್ಟಿದೆ